Matthew 20:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಅವರಿಗೆ, ‘ನೀವು ಹೋಗಿ ನನ್ನ ತೋಟದಲ್ಲಿ ಕೆಲಸ ಮಾಡುವುದಾದರೆ ನಿಮ್ಮ ಕೆಲಸಕ್ಕೆ ಯೋಗ್ಯವಾದ ಕೂಲಿಯನ್ನು ಕೊಡುತ್ತೇನೆ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.
Kannada BSI Bible 2016
ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ ಅನ್ನಲು ಅವರು ತೋಟಕ್ಕೆ ಹೋದರು.
Kannada Bible (KNCL) BSI 2016
ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುತ್ತೇನೆ,’ ಎಂದು ಹೇಳಿದನು.