Matthew 20:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸುಮಾರು ಐದು ಗಂಟೆಗೆ ಆ ಯಜಮಾನನು ಮತ್ತೊಮ್ಮೆ ಪೇಟೆಗೆ ಹೋದನು. ಅಲ್ಲಿ ನಿಂತಿದ್ದ ಕೆಲವರನ್ನು ಅವನು ಕಂಡು, ‘ನೀವು ದಿನವಿಡೀ ಕೆಲಸ ಮಾಡದೆ ಸುಮ್ಮನೆ ಏಕೆ ನಿಂತಿದ್ದೀರಿ?’ ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಂದು ಸಾರಿ ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
Kannada BSI Bible 2016
ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿರಿಗಿ ಹೆಚ್ಚುಕಡಿಮೆ ಸಾಯಂಕಾಲ ಐದು ಗಂಟೆಗೆ ಹೋಗಿ ಬೇರೆ ಕೆಲವರು ನಿಂತಿರುವದನ್ನು ಕಂಡು ಅವರನ್ನು - ದಿನವೆಲ್ಲಾ ಇಲ್ಲಿ ಯಾಕೆ ಸುಮ್ಮನೆ ನಿಂತಿದ್ದೀರಿ ಎಂದು ಕೇಳಲು
Kannada Bible (KNCL) BSI 2016
ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಸುಮಾರು ಐದು ಗಂಟೆಗೆ ಅವನು ಹೊರಗೆ ಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವುದನ್ನು ಕಂಡು, ‘ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವುದೇಕೆ?’ ಎಂದು ಕೇಳಿದನು.