Matthew 20:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅದಕ್ಕೆ ಅವರು, ‘ನಮಗೆ ಯಾರೂ ಕೆಲಸ ಕೊಡಲಿಲ್ಲ’ ಎಂದು ಉತ್ತರಕೊಟ್ಟರು. “ಆ ಯಜಮಾನನು, ‘ಹಾಗಾದರೆ ನೀವು ಹೋಗಿ ನನ್ನ ತೋಟದಲ್ಲಿ ಕೆಲಸ ಮಾಡಿರಿ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.
Kannada BSI Bible 2016
ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು.
Kannada Bible (KNCL) BSI 2016
ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.