Matthew 20:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.
Kannada BSI Bible 2016
ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಜೇಹೊತ್ತಿಗೆ ದ್ರಾಕ್ಷೇತೋಟದ ಯಜಮಾನನು ತನ್ನ ಪಾರುಪತ್ಯಗಾರನಿಗೆ - ಆ ಆಳುಗಳನ್ನು ಕರೆದು ಕಡೆಗೆ ಬಂದವರನ್ನು ಮೊದಲು ಮಾಡಿಕೊಂಡು ಮೊದಲು ಬಂದವರ ತನಕ ಅವರಿಗೆ ಕೂಲಿಕೊಡು ಎಂದು ಹೇಳಿದನು.
Kannada Bible (KNCL) BSI 2016
“ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಂಜೆಯಾದಾಗ, ದ್ರಾಕ್ಷಿಯ ತೋಟದ ಯಜಮಾನನು ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನವರೆಗೆ ಕೂಲಿಯನ್ನು ಕೊಡು,’ ಎಂದು ಹೇಳಿದನು.