Matthew 21:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.
Kannada BSI Bible 2016
ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿ
Kannada Bible (KNCL) BSI 2016
ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋದರು. ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು. ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.