Matthew 21:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.
Kannada BSI Bible 2016
ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮಹಾಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನೂ ದಾವೀದನ ಕುಮಾರನಿಗೆ ಜಯ ಜಯವೆಂದು ದೇವಾಲಯದಲ್ಲಿ ಕೂಗುತ್ತಿರುವ ಹುಡುಗರನ್ನೂ ನೋಡಿ ಸಿಟ್ಟುಗೊಂಡು
Kannada Bible (KNCL) BSI 2016
ಅವರು ಮಾಡಿದ ಅತಿಶಯ ಕಾರ್ಯಗಳನ್ನು ಮುಖ್ಯಯಾಜಕರು ಹಾಗೂ ಧರ್ಮಶಾಸ್ತ್ರಿಗಳು ನೋಡಿದರು. ದೇವಾಲಯದಲ್ಲಿ ಮಕ್ಕಳು, ‘ದಾವೀದಕುಲಪುತ್ರನಿಗೆ ಜಯವಾಗಲಿ’ ಎಂದು ಘೋಷಿಸುವುದನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು.