Matthew 21:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಈ ಚಿಕ್ಕಮಕ್ಕಳು ಹೇಳುತ್ತಿರುವ ಮಾತುಗಳನ್ನು ನೀನು ಕೇಳಿಸಿಕೊಂಡೆಯೋ?” ಎಂದು ಕೇಳಿದರು. ಯೇಸು, “ಹೌದು, ‘ನೀನು ಚಿಕ್ಕಮಕ್ಕಳಿಗೂ ಎಳೆಯ ಕೂಸುಗಳಿಗೂ ಸ್ತೋತ್ರಮಾಡಲು ಕಲಿಸಿರುವೆ’ ಎಂದು ಪವಿತ್ರ ಗ್ರಂಥದಲ್ಲಿ ಹೇಳಿದೆ. ನೀವು ಪವಿತ್ರ ಗ್ರಂಥವನ್ನು ಓದಿಲ್ಲವೇ?” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.
Kannada BSI Bible 2016
ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನಿಗೆ - ಇವರು ಹೇಳುವದನ್ನು ಕೇಳುತ್ತೀಯಾ ಎಂದು ಹೇಳಲು ಯೇಸು - ಹೌದು, ಕೇಳುತ್ತೇನೆ, ಸಣ್ಣ ಮಕ್ಕಳ ಬಾಯಿಂದಲೂ ಮೊಲೇಕೂಸುಗಳ ಬಾಯಿಂದಲೂ ಸ್ತೋತ್ರವನ್ನು ಸಿದ್ಧಿಗೆ ತಂದಿ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ? ಅಂದನು.
Kannada Bible (KNCL) BSI 2016
“ಮಕ್ಕಳು ಹೇಳುವುದು ನಿನಗೆ ಕೇಳಿಸುತ್ತಿದೆಯೋ?” ಎಂದು ಕೋಪಾವೇಶದಿಂದ ಯೇಸುವನ್ನು ಪ್ರಶ್ನಿಸಿದರು. “ಹೌದು, ಕೇಳಿಸುತ್ತದೆ; ‘ಬಾಲಬಾಲೆಯರ ಬಾಯಿಂದಲೂ ಮೊಲೆಗೂಸುಗಳ ನಾಲಿಗೆಯಿಂದಲೂ ನಿಮಗೆ ಸರ್ವಸ್ತುತಿ ಸಲ್ಲುವಂತೆ ಮಾಡಿದ್ದೀರಿ’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಎಂದೂ ಓದಿಲ್ಲವೆ?” ಎಂದು ಉತ್ತರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.