Matthew 21:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
Kannada BSI Bible 2016
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
Kannada Bible (KNCL) BSI 2016
ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.