Matthew 21:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮ ಎದುರಿನಲ್ಲಿ ಇರುವ ಪಟ್ಟಣದೊಳಕ್ಕೆ ಹೋಗಿ. ನೀವು ಅದನ್ನು ಪ್ರವೇಶಿಸಿದಾಗ, ಅಲ್ಲೇ ಕಟ್ಟಿರುವ ಒಂದು ಕತ್ತೆಯನ್ನು ಕಾಣುತ್ತೀರಿ. ಆ ಕತ್ತೆಯ ಜೊತೆಯಲ್ಲಿ ಒಂದು ಕತ್ತೆಮರಿಯನ್ನು ಸಹ ನೀವು ಕಾಣುವಿರಿ. ಆ ಎರಡು ಕತ್ತೆಗಳನ್ನು ಬಿಚ್ಚಿ ಅವುಗಳನ್ನು ನನ್ನ ಬಳಿಗೆ ತನ್ನಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.
Kannada BSI Bible 2016
ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಇಬ್ಬರು ಶಿಷ್ಯರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರ ಕೂಡ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತರಕ್ಕೆ ಹಿಡುಕೊಂಡು ಬನ್ನಿರಿ.
Kannada Bible (KNCL) BSI 2016
ಅಲ್ಲಿ ಯೇಸು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗೆ ಇರುವ ಆ ಹಳ್ಳಿಗೆ ಹೋಗಿರಿ. ಅಲ್ಲಿ ಕಟ್ಟಿಹಾಕಿರುವ ಒಂದು ಹೇಸರಗತ್ತೆಯನ್ನೂ ಅದರ ಮರಿಯನ್ನೂ ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ, “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ತಕ್ಷಣವೇ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಿರುವುದನ್ನು ನೀವು ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ.