Matthew 21:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು ಇದನ್ನು ನೋಡಿ ಬಹಳ ಆಶ್ಚರ್ಯಪಟ್ಟು, “ಈ ಅಂಜೂರದ ಮರವು ಅಷ್ಟು ಬೇಗನೆ ಹೇಗೆ ಒಣಗಿ ಹೋಯಿತು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.
Kannada BSI Bible 2016
ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಯರು ಅದನ್ನು ನೋಡಿ ಬೆರಗಾಗಿ - ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿ ಹೋಯಿತಲ್ಲಾ; ಅದು ಹೇಗೆ? ಅಂದರು.
Kannada Bible (KNCL) BSI 2016
ಇದನ್ನು ನೋಡಿ ಶಿಷ್ಯರು ನಿಬ್ಬೆರಗಾದರು. “ಈ ಅಂಜೂರದ ಮರ ಇಷ್ಟು ಬೇಗನೆ ಹೇಗೆ ಒಣಗಿಹೋಯಿತು?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, “ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?” ಎಂದು ಕೇಳಿದರು.