Matthew 21:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
Kannada BSI Bible 2016
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆತನು ದೇವಾಲಯಕ್ಕೆ ಬಂದು ಬೋಧಿಸುತ್ತಿರಲಾಗಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಆತನ ಬಳಿಗೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಕೇಳಲು
Kannada Bible (KNCL) BSI 2016
ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.