Matthew 21:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಕೊಟ್ಟರೆ, ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
Kannada BSI Bible 2016
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ ಹೇಳಿದ್ದೇನಂದರೆ - ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನೂ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬದನ್ನು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಅದಕ್ಕೆ ಯೇಸು, “ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ಉತ್ತರಕೊಟ್ಟರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಎಂದು ಹೇಳಿ,