Matthew 21:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, ‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;
Kannada BSI Bible 2016
ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ? ಮನುಷ್ಯರಿಂದಲೋ ಅಂದನು. ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ನಮಗೆ ಹೇಳಾನು;
Kannada Bible (KNCL) BSI 2016
'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.