Matthew 21:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
Kannada BSI Bible 2016
ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರಿಂದ ಬಂತೆಂದು ಹೇಳಿದರೆ ನಮಗೆ ಜನರ ಭಯವದೆ; ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸಿದ್ದಾರಲ್ಲಾ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.
Kannada Bible (KNCL) BSI 2016
ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.