Matthew 21:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರು, “ಯೋಹಾನನಿಗೆ ಎಲ್ಲಿಂದ ಅಧಿಕಾರ ಬಂದಿತೋ ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಆಗ ಯೇಸು, “ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆ ಎಂಬುದನ್ನು ನಾನು ಸಹ ನಿಮಗೆ ಹೇಳುವುದಿಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
Kannada BSI Bible 2016
ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೆಗೆ ಅವರು - ನಾವರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ - ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ.
Kannada Bible (KNCL) BSI 2016
ಬಳಿಕ ಬಂದು, “ನಮಗೆ ಗೊತ್ತಿಲ್ಲ,” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು, “ಹಾಗಾದರೆ, ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.