Matthew 21:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಆ ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, ‘ಮಗನೇ ಈ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು
Kannada BSI Bible 2016
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು - ಮಗನೇ, ಹೋಗಿ ಈ ಹೊತ್ತು ದ್ರಾಕ್ಷೇತೋಟದಲ್ಲಿ ಕೆಲಸಮಾಡು ಅಂದಾಗ
Kannada Bible (KNCL) BSI 2016
“ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು.