Matthew 21:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ತಂದೆಯು ಇನ್ನೊಬ್ಬ ಮಗನ ಬಳಿಗೆ ಹೋಗಿ, ‘ಮಗನೇ, ಈ ದಿನ ನೀನು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸ ಮಾಡು’ ಎಂದನು. ಮಗನು, ‘ಆಗಲಿಯಪ್ಪಾ, ನಾನು ಹೋಗಿ ಕೆಲಸ ಮಾಡುತ್ತೇನೆ’ ಎಂದನು. ಆದರೆ ಆ ಮಗನು ಹೋಗಲೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.
Kannada BSI Bible 2016
ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು - ಹೋಗುತ್ತೇನಪ್ಪಾ ಅಂದಾಗ್ಯೂ ಹೋಗಲೇ ಇಲ್ಲ.
Kannada Bible (KNCL) BSI 2016
ತಂದೆ ಎರಡನೆಯ ಮಗನ ಹತ್ತಿರ ಹೋಗಿ ಅಂತೆಯೇ ತೋಟಕ್ಕೆ ಹೋಗಲು ಹೇಳಿದ. ಅವನು, ‘ಇಗೋ, ಹೋಗುತ್ತೇನಪ್ಪಾ’, ಎಂದು ಹೇಳಿದ. ಆದರೆ ಹೋಗಲೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಮೇಲೆ ತಂದೆ ಎರಡನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಉತ್ತರವಾಗಿ, ‘ಅಪ್ಪಾ, ನಾನು ಹೋಗುತ್ತೇನೆ,’ ಎಂದು ಹೇಳಿದರೂ ಹೋಗಲಿಲ್ಲ.