Matthew 21:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಇಬ್ಬರು ಗಂಡುಮಕ್ಕಳಲ್ಲಿ ತಂದೆಗೆ ಯಾರು ವಿಧೇಯರಾದರು?” ಆಗ ಯೆಹೂದ್ಯ ನಾಯಕರು, “ಮೊದಲನೆಯ ಮಗ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸುಂಕವಸೂಲಿಗಾರರನ್ನು ಮತ್ತು ವೇಶ್ಯೆಯರನ್ನು ಕೆಟ್ಟಜನರೆಂದು ನೀವು ಅಂದುಕೊಂಡಿದ್ದೀರಿ. ಆದರೆ ಅವರು ನಿಮಗಿಂತ ಮುಂಚೆಯೇ ದೇವರ ರಾಜ್ಯಕ್ಕೆ ಪ್ರವೇಶಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada BSI Bible 2016
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, “ಮೊದಲನೆಯವನೇ,” ಎಂದರು. ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.