Matthew 21:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.
Kannada BSI Bible 2016
ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನು ಧರ್ಮಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು, ನೀವು ಅವನನ್ನು ನಂಬಲಿಲ್ಲ; ಭ್ರಷ್ಟರೂ ಸೂಳೆಯರೂ ಅವನನ್ನು ನಂಬಿದರು; ನೀವು ಇದನ್ನು ನೋಡಿದಾಗ್ಯೂ ಪಶ್ಚಾತ್ತಾಪಪಡಲಿಲ್ಲ, ಅವನನ್ನು ನಂಬಲಿಲ್ಲ.
Kannada Bible (KNCL) BSI 2016
ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”