Matthew 21:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.
Kannada BSI Bible 2016
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.
Kannada Bible (KNCL) BSI 2016
“ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.