Matthew 21:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವನು ಮೊದಲನೆ ಸಲ ಕಳುಹಿಸಿದ ಸೇವಕರಿಗಿಂತಲೂ ಹೆಚ್ಚು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ಆದರೆ ರೈತರು ಮೊದಲನೆ ಸಲ ಮಾಡಿದಂತೆಯೇ ಈ ಸೇವಕರಿಗೂ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.
Kannada BSI Bible 2016
ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪುನಃ ಮೊದಲಿನವರಿಗಿಂತ ಹೆಚ್ಚುಮಂದಿ ಆಳುಗಳನ್ನು ಕಳುಹಿಸಿದನು, ಅವರಿಗೂ ಹಾಗೆಯೇ ಮಾಡಿದರು.
Kannada Bible (KNCL) BSI 2016
ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಜಮಾನನು ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು. ಗೇಣಿಗೆದಾರರು ಅವರಿಗೂ ಹಾಗೆಯೇ ಮಾಡಿದರು.