Matthew 21:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
Kannada BSI Bible 2016
ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆತನಿಗೆ - ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ಕಾಲಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ಒಕ್ಕಲಿಗರಿಗೆ ತನ್ನ ತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
Kannada Bible (KNCL) BSI 2016
“ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.