Matthew 21:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’
Kannada BSI Bible 2016
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?
Kannada Bible (KNCL) BSI 2016
ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?