Matthew 21:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಹಾಯಾಜಕರು ಮತ್ತು ಫರಿಸಾಯರು ಯೇಸು ಹೇಳಿದ ಈ ಸಾಮ್ಯಗಳನ್ನು ಕೇಳಿ, ತಮ್ಮನ್ನೇ ಕುರಿತು ಇವುಗಳನ್ನು ಹೇಳಿದನೆಂದು ತಿಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;
Kannada BSI Bible 2016
ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತಾಡುತ್ತಾನೆಂದು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು;
Kannada Bible (KNCL) BSI 2016
ಮುಖ್ಯಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, ‘ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,’ ಎಂದು ಅರ್ಥಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಖ್ಯಯಾಜಕರೂ ಫರಿಸಾಯರೂ ಯೇಸುವಿನ ಸಾಮ್ಯಗಳನ್ನು ಕೇಳಿದಾಗ, ತಮ್ಮ ವಿಷಯದಲ್ಲಿಯೇ ಅದನ್ನು ಹೇಳಿದರೆಂದು ಅರ್ಥಮಾಡಿಕೊಂಡರು.