Matthew 21:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯೇಸುವನ್ನು ಬಂಧಿಸಲು ಉಪಾಯ ಹುಡುಕಿದರೂ ಜನರಿಗೆ ಭಯಪಟ್ಟು ಬಂಧಿಸಲಿಲ್ಲ. ಏಕೆಂದರೆ ಯೇಸು ಒಬ್ಬ ಪ್ರವಾದಿ ಎಂದು ಜನರು ನಂಬಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
Kannada BSI Bible 2016
ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
Kannada Bible (KNCL) BSI 2016
ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು.