Matthew 21:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೇಸು ಕುಳಿತುಕೊಂಡು ಜೆರುಸಲೇಮಿಗೆ ಹೋದನು. ಅನೇಕ ಜನರು ತಮ್ಮ ಮೇಲಂಗಿಗಳನ್ನು ಯೇಸುವಿಗಾಗಿ ದಾರಿಯ ಮೇಲೆ ಹಾಸಿದರು. ಕೆಲವರು ಮರಗಳಿಂದ ಚಿಗುರುಗಳನ್ನು ಕತ್ತರಿಸಿಕೊಂಡು ಬಂದು ದಾರಿಯ ಮೇಲೆ ಹರಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.
Kannada BSI Bible 2016
ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ಚಿಗುರುಗಳನ್ನು ಕೊಯಿದು ದಾರಿಯಲ್ಲಿ ಹರಡುತ್ತಿದ್ದರು.
Kannada Bible (KNCL) BSI 2016
ಜನಸಮೂಹದಲ್ಲಿ ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರದೆಲೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರ ದೊಡ್ಡ ಸಮೂಹವು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರಗಳಿಂದ ಕೊಂಬೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.