Matthew 21:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
Kannada BSI Bible 2016
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.
Kannada Bible (KNCL) BSI 2016
ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು: “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.