Matthew 22:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂತೆಯೇ ಸೇವಕರು ಬೀದಿಬೀದಿಗಳಿಗೆ ಹೋಗಿ ತಾವು ಕಂಡ ಜನರನ್ನೆಲ್ಲಾ ಒಳ್ಳೆಯವರು, ಕೆಟ್ಟವರು ಎನ್ನದೆ ಒಟ್ಟುಗೂಡಿಸಿ ಊಟ ಸಿದ್ಧವಾಗಿದ್ದ ಸ್ಥಳಕ್ಕೆ ಕರೆತಂದರು. ಆ ಸ್ಥಳವು ಜನರಿಂದ ತುಂಬಿಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
Kannada BSI Bible 2016
ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಆಳುಗಳು ಹಾದಿಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರು ಅನ್ನದೆ ಕಂಡವರನ್ನೆಲ್ಲಾ ಕೂಡಿಸಿ ಕರಕೊಂಡು ಬಂದರು.
Kannada Bible (KNCL) BSI 2016
ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.