Matthew 22:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸ್ನೇಹಿತನೇ, ನೀನು ಒಳಗೆ ಹೇಗೆ ಬಂದೆ? ನೀನು ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲವಲ್ಲಾ’ ಅಂದನು. ಆದರೆ ಅವನು ಉತ್ತರ ನೀಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
Kannada BSI Bible 2016
ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು - ಏನಪ್ಪಾ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
Kannada Bible (KNCL) BSI 2016
‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಆ ಮನುಷ್ಯನಿಗೆ, ‘ಸ್ನೇಹಿತನೇ, ಮದುವೆಯ ವಸ್ತ್ರವಿಲ್ಲದೆ ನೀನು ಒಳಗೆ ಹೇಗೆ ಬಂದೆ?’ ಎಂದು ಕೇಳಲು ಅವನು ಸುಮ್ಮನಿದ್ದನು.