Matthew 22:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
Kannada BSI Bible 2016
ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅರಸನು ಸೇವಕರಿಗೆ - ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.
Kannada Bible (KNCL) BSI 2016
ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.