Matthew 22:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
Kannada BSI Bible 2016
ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.
Kannada Bible (KNCL) BSI 2016
ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.