Matthew 22:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬೋಧಕನೇ, ವಿವಾಹಿತನೊಬ್ಬನು ಮಕ್ಕಳನ್ನು ಪಡೆಯದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆ ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
Kannada BSI Bible 2016
ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಬೋಧಕನೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದನಷ್ಟೆ.
Kannada Bible (KNCL) BSI 2016
ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.