Matthew 22:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;
Kannada BSI Bible 2016
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು ಉತ್ತರವಾಗಿ ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದೆ ತಪ್ಪುವವರಾಗಿದ್ದೀರಿ;
Kannada Bible (KNCL) BSI 2016
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.