Matthew 22:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸದ್ದುಕಾಯರು ಪ್ರತಿವಾದ ಮಾಡಲಾಗದ ರೀತಿಯಲ್ಲಿ ಯೇಸು ಉತ್ತರಕೊಟ್ಟನೆಂಬುದು ಫರಿಸಾಯರಿಗೆ ತಿಳಿದು ಅವರು ಒಟ್ಟಾಗಿ ಯೇಸುವಿನ ಬಳಿಗೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
Kannada BSI Bible 2016
ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸದ್ದುಕಾಯರ ಬಾಯಿ ಕಟ್ಟಿದನೆಂದು ಫರಿಸಾಯರು ಕೇಳಿ ಅಲ್ಲಿಗೆ ಕೂಡಿಬಂದರು.
Kannada Bible (KNCL) BSI 2016
ಯೇಸುಸ್ವಾಮಿ ‘ಸದ್ದುಕಾಯ’ರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು.