Matthew 22:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡನೆಯ ಆಜ್ಞೆಯು ಮೊದಲನೆಯ ಆಜ್ಞೆಯಷ್ಟೇ ಪ್ರಮುಖವಾಗಿದೆ. ‘ನೀನು ನಿನ್ನನ್ನು ಪ್ರೀತಿಸುವಂತೆಯೇ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಆ ಆಜ್ಞೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
Kannada BSI Bible 2016
ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಒಂದು ಉಂಟು, ಅದು ಯಾವದಂದರೆ - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ.
Kannada Bible (KNCL) BSI 2016
ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.