Matthew 22:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನ ಪ್ರಶ್ನೆಗೆ ಉತ್ತರಕೊಡಲು ಫರಿಸಾಯರಲ್ಲಿ ಯಾರಿಗೂ ಸಾಧ್ಯವಾಗಲಿಲ್ಲ. ಅಂದಿನಿಂದ ಯೇಸುವನ್ನು ವಂಚಿಸುವುದಕ್ಕಾಗಿ ಪ್ರಶ್ನೆ ಕೇಳಲು ಯಾರೂ ಧೈರ್ಯಪಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.
Kannada BSI Bible 2016
ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಇನ್ನೇನಾದರೂ ಕೇಳುವದಕ್ಕೆ ಯಾರಿಗೂ ಧೈರ್ಯ ಹುಟ್ಟಲಿಲ್ಲ.
Kannada Bible (KNCL) BSI 2016
ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ.