Matthew 23:14 — Compare Translations
4 translations compared side by side
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.
Kannada BSI Bible 2016
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
Kannada Bible (KNCL) BSI 2016
ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತಿ ಕಠಿಣವಾದ ದಂಡನೆಗೆ ಗುರಿಯಾಗುವಿರಿ).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.