Matthew 23:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.
Kannada BSI Bible 2016
ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬನನ್ನು ನಿಮ್ಮ ಮತದಲ್ಲಿ ಸೇರಿಸಿಕೊಳ್ಳುವದಕ್ಕಾಗಿ ಭೂವಿುಯನ್ನೂ ಸಮುದ್ರವನ್ನೂ ಸುತ್ತಿಕೊಂಡು ಬರುತ್ತೀರಿ; ಅವನು ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟಾಗಿ ನರಕ ಪಾತ್ರನಾಗಮಾಡುತ್ತೀರಿ.
Kannada Bible (KNCL) BSI 2016
ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.