Matthew 23:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
Kannada BSI Bible 2016
ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ದಾರಿತೋರಿಸುವ ಕುರುಡರೇ, ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ನೀವು ಹೇಳುತ್ತೀರಿ.
Kannada Bible (KNCL) BSI 2016
“ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.