Matthew 23:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
Kannada BSI Bible 2016
ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ಹೇಳುತ್ತೀರಿ.
Kannada Bible (KNCL) BSI 2016
ಒಬ್ಬನು ಬಲಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನೂ ಬದ್ಧನಲ್ಲ. ಬಲಿಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಯಾರಾದರೂ ಬಲಿಪೀಠದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.