Matthew 23:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
Kannada BSI Bible 2016
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಂಚಪಾತ್ರೆ ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ಅವು ಒಳಗೆ ಸುಲುಕೊಂಡವುಗಳಿಂದಲೂ ಇಹಭೋಗ ಪದಾರ್ಥಗಳಿಂದಲೂ ತುಂಬಿರುತ್ತವೆ.
Kannada Bible (KNCL) BSI 2016
ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರಭಾಗಗಳನ್ನೇನೋ ಶುಚಿಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳ್ಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿಹೋಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.