Matthew 23:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.
Kannada BSI Bible 2016
ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಚಂದವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.
Kannada Bible (KNCL) BSI 2016
“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.