Matthew 23:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಅದೇ ರೀತಿ ಇದ್ದೀರಿ. ನಿಮ್ಮನ್ನು ನೋಡಿದ ಜನರು ನಿಮ್ಮನ್ನು ಒಳ್ಳೆಯವರೆಂದು ಭಾವಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಅಂತರಂಗವು ಕಪಟದಿಂದಲೂ ದುಷ್ಟತನದಿಂದಲೂ ತುಂಬಿಕೊಂಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.
Kannada BSI Bible 2016
ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ನೀವು ಸಹ ಹೊರಗೆ ಜನರಿಗೆ ಸತ್ಪುರುಷರಂತೆ ಕಾಣಿಸಿಕೊಳ್ಳುತ್ತೀರಿ ಸರಿ, ಆದರೆ ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.
Kannada Bible (KNCL) BSI 2016
ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆಯೇ, ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ನೀವು ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.