Matthew 23:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟುತ್ತೀರಿ. ಒಳ್ಳೆಯವರಾಗಿ ಜೀವಿಸದವರ ಗೋರಿಗಳಿಗೆ ಹೋಗಿ ಗೌರವ ತೋರಿಸುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,
Kannada BSI Bible 2016
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ,
Kannada Bible (KNCL) BSI 2016
“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.