Matthew 23:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.
Kannada BSI Bible 2016
ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅವರು ನಿಮಗೆ ಏನೇನು ಹೇಳುತ್ತಾರೋ ಅದನ್ನೆಲ್ಲಾ ಮಾಡಿರಿ, ಕಾಪಾಡಿಕೊಳ್ಳಿರಿ; ಆದರೆ ಅವರ ನಡತೆಯ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೇ ಹೊರತು ನಡೆಯುವದಿಲ್ಲ.
Kannada Bible (KNCL) BSI 2016
ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವರು ನಿಮಗೆ ಹೇಳುವುದನ್ನೆಲ್ಲಾ ಅನುಸರಿಸಿ ನಡೆಯಿರಿ. ಆದರೆ ಅವರ ನಡತೆಗಳ ಪ್ರಕಾರ ನೀವು ನಡೆಯಬೇಡಿರಿ. ಏಕೆಂದರೆ ಅವರು ಹೇಳಿದಂತೆ ಮಾಡುವುದಿಲ್ಲ.