Matthew 23:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನಮ್ಮ ಪಿತೃಗಳ ಕಾಲದಲ್ಲಿ ನಾವು ಇದ್ದಿದ್ದರೆ ಈ ಪ್ರವಾದಿಗಳನ್ನು ಕೊಲ್ಲುವುದಕ್ಕೆ ಅವರಿಗೆ ಸಹಾಯ ಮಾಡುತ್ತಿರಲಿಲ್ಲ’ ಎಂದು ಹೇಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.
Kannada BSI Bible 2016
ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿವಂತರ ಗೋರಿಗಳನ್ನು ಅಲಂಕರಿಸಿ - ನಾವು ನಮ್ಮ ಹಿರಿಯರ ಕಾಲದಲ್ಲಿ ಇರುತ್ತಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ ಅನ್ನುತ್ತೀರಿ.
Kannada Bible (KNCL) BSI 2016
ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ‘ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಪಿತೃಗಳೊಂದಿಗೆ ಪಾಲುಗಾರರಾಗುತ್ತಿರಲಿಲ್ಲ’ ಎಂದು ಹೇಳುತ್ತೀರಿ.