Matthew 23:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
Kannada BSI Bible 2016
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.
Kannada Bible (KNCL) BSI 2016
ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.