Matthew 23:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
Kannada BSI Bible 2016
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.
Kannada Bible (KNCL) BSI 2016
“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.