Matthew 23:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನಗೆ ಹೇಳುವುದೇನೆಂದರೆ, ‘ಪ್ರಭುವಿನ ಹೆಸರಿನಲ್ಲಿ ಬರುವಾತನನ್ನು ದೇವರು ಆಶೀರ್ವದಿಸಲಿ’ ಎಂದು ನೀನು ಹೇಳುವ ತನಕ ನನ್ನನ್ನು ನೋಡುವುದೇ ಇಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಿಂದ, ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.
Kannada BSI Bible 2016
ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಿನಿಂದ - ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ ಎಂದು ನೀವು ಹೇಳುವ ತನಕ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಏಕೆಂದರೆ, ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು!’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಮತ್ತೆ ಕಾಣಲಾರಿರಿ ಎಂಬುದು ನಿಶ್ಚಯ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ‘ಕರ್ತನ ಹೆಸರಿನಲ್ಲಿ ಬರುವವರು ಧನ್ಯರು’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಎಂದರು.