Matthew 23:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಲೋಕದಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿ. ನಿಮಗೆ ಒಬ್ಬನೇ ತಂದೆ. ಆತನು ಪರಲೋಕದಲ್ಲಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ
Kannada BSI Bible 2016
ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಮ್ಮ ತಂದೆ ಎಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮಗೆ ತಂದೆ.
Kannada Bible (KNCL) BSI 2016
ಇಹದಲ್ಲಿ ನೀವು ಯಾರನ್ನೂ ‘ಪಿತನೇ’ ಎಂದು ಸಂಬೋಧಿಸಬೇಡಿ. ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ.